ಅಡ್ಡೂರು: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅಡ್ಡೂರು ಫೈವ್ ಸ್ಟಾರ್ ಯಂಗ್ ಬಾಯ್ಸ್ ವತಿಯಿಂದ ಗುರುವಾರ ಇಲ್ಲಿನ ಗರಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಅಡ್ಡೂರು ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಧ್ಯಕ್ಷ ಹಬೀಬ್ ಕಟ್ಟಪುಣಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗ್ರಾಮದ 23 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ ಇಬ್ರಾಹೀಂ, ಸಂಸ್ಥೆಯ ಉಪಾಧ್ಯಕ್ಷರಾದ ಇಲ್ಯಾಸ್ ಹೊಳೆಬದಿ, ಅಶ್ರಫ್ ನಡುಗುಡ್ಡೆ, ಗ್ರಾಮ ಪಂಚಾಯತ್ ಸದಸ್ಯರಾದ ಎ.ಕೆ. ರಿಯಾಝ್, ಮನ್ಸೂರ್ ಟಿಬೆಟ್, ಬಬಿತಾ, ಸಂಸ್ಥೆಯ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ಸಾದಿಕ್, ಅಸ್ರಾರ್, ಸ್ವಲಾತ್ ಕಮಿಟಿ ಅಧ್ಯಕ್ಷ ಹೈದರ್ ಕೆಳಗಿನಕೆರೆ ಮತ್ತಿತರರು ಉಪಸ್ಥಿತರಿದ್ದರು.