ಮಂಗಳೂರು: ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾ ಅವರ 27ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಮಂಗಳೂರು ಸಂತ ಮದರ್ ತೆರೇಸಾ ವಿಚಾರ ವೇದಿಕೆ ವತಿಯಿಂದ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮ ಸೆ.3 ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಸಂಸದರೂ ಆಗಿರುವ ಸಸಿಕಾಂತ್ ಸೆಂಥಿಲ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಅವರು ವಿಯಷ ಮಂಡಿಸಲಿದ್ದಾರೆ. ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಮಾಜಿಕ ಚಿಂತಕಿ ಯು.ಟಿ. ಆಯಿಶಾ ಫರ್ಝಾನ ಸೇರಿದಂತೆ ಮೊದಲಾದವರು ಭಾಗವಹಿಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 8:15ಕ್ಕೆ ಆಯ್ದ ಪ್ರಮುಖ ಕಾಲೇಜು ವಿದ್ಯಾರ್ಥಿಗಳಿಂದ ಪ್ರೀತಿಯ ಸಿಂಚನ ಸೌಹಾರ್ದ ಗಾಯನ ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

