Saturday, June 7, 2025

ಅಡ್ಡೂರು ಫೈವ್ ಸ್ಟಾರ್ ಯಂಗ್ ಬಾಯ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗರಿ

by eesamachara
0 comment
five star addoor

ಮಂಗಳೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು (ರಿ.) ಸಂಸ್ಥೆ ಕ್ರೀಡಾ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ 2024ನೇ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.

ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಸಂಸ್ಥೆಯು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದಲ್ಲಿ ಸುಮಾರು 27 ವರ್ಷಗಳಿಂದ ಸಾಮಾಜಿಕ, ಕ್ರೀಡಾ, ಶೈಕ್ಷಣಿಕ ರಂಗದಲ್ಲಿ ಸಕ್ರೀಯವಾಗಿದ್ದುಕೊಂಡು ಸಮಾಜದಲ್ಲಿ ನಿಸ್ವಾರ್ಥ ಸೇವೆ ನೀಡುತ್ತಾ ಬಂದಿದ್ದು, ಗ್ರಾಮದ ಅಭಿವೃದ್ಧಿಗೆ ಸಂಘಟಿತವಾಗಿ ಶ್ರಮಿಸುತ್ತಿದೆ.  

ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಉಚಿತ ಆರೋಗ್ಯ ಶಿಬಿರ, ಬಡ ರೋಗಿಗಳಿಗೆ ಆರ್ಥಿಕ ನೆರವು, ಸ್ವಚ್ಛತಾ ಆಂದೋಲನ, ರಕ್ತದಾನ ಶಿಬಿರ, ವಿಶಿಷ್ಟ ಮಕ್ಕಳಿಗೆ ಸಹಾಯ ಧನ, ಮಹಿಳೆಯರಿಗೆ ಉಚಿತ ಹೊಳಿಗೆ ಯಂತ್ರ ವಿತರಣೆ, ಸಾಂಕ್ರಾಮಿಕ ರೋಗಗಳ ಜಾಗೃತಿ ಕಾರ್ಯಕ್ರಮ, ಸೌಹಾರ್ದ ಕ್ರೀಡಾ ಕಲರವ, ಗ್ರಾಮೀಣ ಕ್ರೀಡಾ ಕೂಟ, ಅಂತರ್ ತಾಲೂಕು ಮಟ್ಟದ ಕ್ರೀಡಾಕೂಟ, ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಅರ್ಹರಿಗೆ ರೇಷನ್ ಕಿಟ್ ವಿತರಣೆ,  ವನಮಹೋತ್ಸವ ಕಾರ್ಯಕ್ರಮ ಮತ್ತಿತರ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಜಾತಿ-ಧರ್ಮ ಮೀರಿ ಮಾನವೀಯ ಕಳಕಳಿಯ ಸಂಸ್ಥೆಯಾಗಿ ಗುರುತಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಸಂಸ್ಥೆಯ ಸಾಮಾಜಿಕ ಸೇವಾ ಚಟುವಟಿಕೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios