Monday, December 23, 2024

ದಕ್ಷಿಣ ಕನ್ನಡ| ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್

by eesamachara
0 comment
loka adalath

ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ‌ ಅನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ಲೋಕ ಅದಾಲತ್‌ನಲ್ಲಿ ನ್ಯಾಯಾಧಿಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜೀ ಮಾಡಕೊಳ್ಳಲು ಸೂಕ್ತ ಮಾರ್ಗದರ್ಶನವನ್ನು ನೀಡಲಾಗುತ್ತದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.

ಮೋಟಾರು ವಾಹನ ಅಪಘಾತ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ ಪ್ರಕರಣ, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣ, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣ, ಭೂ ಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣ, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣ, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣ, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios