Saturday, June 7, 2025

ಅತ್ಯಾಚಾರ ಕೇಸ್: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಪ್ರಜ್ವಲ್ ರೇವಣ್ಣ

by eesamachara
0 comment
prajwal revanna

ದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.  ನ.11ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ. 

ಕಳೆದ ಅ. 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. 

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios