Wednesday, April 16, 2025

ಕರ್ನಾಟಕ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಅಂತ್ಯ

by eesamachara
0 comment
Karnataka Bye Election

ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ಇಂದು ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟುಹೋಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ, ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಇಂದು ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ.

ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios