Monday, December 23, 2024

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

by eesamachara
0 comment
Court

ನವದೆಹಲಿ: ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, 2025ರ ಮೇ 13ರವರೆಗೆ ಅವರು ಸಿಜೆಐ ಆಗಿ ಅಧಿಕಾರದಲ್ಲಿ ಇರಲಿದ್ದಾರೆ.

1960ರ ಮೇ 14ರಂದು ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್ ಖನ್ನಾ ದೆಹಲಿಯ ಪ್ರತಿಷ್ಠಿತ ಮಾಡರ್ನ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. 1980ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನಂತರ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದರು.

2004 ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡಿದ್ದ ನ್ಯಾ.ಸಂಜೀವ್ ಖನ್ನಾ ಅವರು, ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿ ಆಗಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಿ ವಾದಿಸಿದ್ದಾರೆ.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕ್ರಮವನ್ನು ಎತ್ತಿಹಿಡಿದ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್ ನೀಡಿದ ಹಲವು ಮಹತ್ವದ ತೀರ್ಪುಗಳಲ್ಲಿ ಖನ್ನಾ ಅವರ ಪಾಲು ಕೂಡ ಇದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios