Saturday, June 7, 2025

ಚನ್ನಪಟ್ಟಣ ಮತ ಎಣಿಕೆ | ನಿಖಿಲ್‌ ಕುಮಾರಸ್ವಾಮಿಗೆ ಹಿನ್ನಡೆ; ಯೋಗೇಶ್ವರ್‌ಗೆ ಭಾರೀ ಮುನ್ನಡೆ

by eesamachara
0 comment

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈ ಪೈಕಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭಾರೀ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 23,210 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್​ಸ್ವಾಮಿ ಅವರು ಹಿನ್ನಡೆ ಅನುಭವಿಸಿದ್ದಾರೆ. 2024ರ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಸಾಕಷ್ಟು ಸದ್ದು ಮಾಡಿತ್ತು. ಹೀಗಾಗಿ ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂದು ಜನರು ಕಾತುರದಿಂದ ಕಾಯುತ್ತಿದ್ದಾರೆ.

ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. 3-4 ಸುತ್ತಿನಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಆದರೆ 11ನೇ ಸುತ್ತಿಗೆ ಬರುವಷ್ಟರಲ್ಲಿ ಕಾಂಗ್ರೆಸ್​ ಮುನ್ನಡೆಯಲ್ಲಿದೆ.

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios