Saturday, April 19, 2025

ಕರ್ನಾಟಕ ಉಪಚುನಾವಣೆ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು: ಎನ್‌ಡಿಎಗೆ ಮುಖಭಂಗ

by eesamachara
0 comment


ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಪ್ರಕಟವಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮಗ ಬಿಜೆಪಿ ಅಭ್ಯರ್ಥಿ ಭರತ್​ ಬೊಮ್ಮಾಯಿ ಅವರಿಗೆ ಸೋಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ್​​ ಅವರಿಗೆ ಗೆಲುವಾಗಿದೆ. ಎನ್​ಡಿಎ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ. ಈ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ವಿರುದ್ಧ ವಿಜಯಶಾಲಿಯಾಗಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios