Saturday, April 19, 2025

ಕರ್ನಾಟಕ ಉಪಚುನಾವಣೆ| 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ: ಇಲ್ಲಿದೆ ಅಭ್ಯರ್ಥಿಗಳು ಪಡೆದ ಮತಗಳ ವಿವರ

by eesamachara
0 comment

ಬೆಂಗಳೂರು: ರಾಜ್ಯದ ಎಲ್ಲ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಭಾರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯಾಗಿದೆ.

ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆದ್ದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಆಯಾ ಕ್ಷೇತ್ರ ಮತ್ತು ರಾಜ್ಯಾದ್ಯಂತ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

1) ಚನ್ನಪಟ್ಟಣ ವಿಧಾನಸಭೆ: ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವ‌ರ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಮತ ಎಣಿಕೆ ಪೂರ್ಣಗೊಂಡಿದ್ದು, ಯೋಗೇಶ್ವ‌ರ್ 25,413 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

20ನೇ ಸುತ್ತಿನ ಅಂತ್ಯಕ್ಕೆ ಯೋಗೇಶ್ವರ್ 1,12,642 ಮತ ಪಡೆದಿದ್ದಾರೆ. ಎನ್‌ಡಿಎ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಗಳಿಸಿದ್ದಾರೆ.

ಸತತ ಮೂರನೇ ಸೋಲು ತಪ್ಪಿಸಿಕೊಂಡಿರುವ ಯೋಗೇಶ್ವರ್, ಇದೇ ಮೊದಲ ಬಾರಿಗೆ (1999 ರಿಂದ ಈ ವರೆಗೂ) ಒಂದು ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ. ಈ ವರೆಗೂ 9 ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ ಇದು ಆರನೇ ಗೆಲುವು ಆಗಿದೆ.

ಕಳೆದೆರೆಡು ಚುನಾವಣೆಗಳಲ್ಲಿಯೂ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸತತ ಮೂರನೇ ಭಾರಿಯು ಪರಾಭವಗೊಳ್ಳುವ ಮೂಲಕ ಹ್ಯಾಟ್ರಿಕ್ ಮುಖಭಂಗ ಅನುಭವಿಸಿದ್ದಾರೆ.

2) ಸಂಡೂರು ವಿಧಾನಸಭೆ: ಕಾಂಗ್ರೆಸ್ ಸಂಸದ ಇ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.

ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ‌ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಅವರು 93,616 ಮತಗಳನ್ನು ಪಡೆದು 9,649 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹನುಮಂತ 83967 ಮತ ಪಡೆದು ಸೋಲು ಕಂಡಿದ್ದಾರೆ.

3) ಶಿಗ್ಗಾಂವಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಇದರೊಂದಿಗೆ ‘ಕಮಲ’ದ ಭದ್ರಕೋಟೆಯಲ್ಲಿ ಈ ಬಾರಿ ‘ಕೈ’ ಬಾವುಟ ಹಾರಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ 13,448 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಜಯಿಸಿದ್ದಾರೆ.

ಯಾಸೀರ್ ಖಾನ್ ಪಠಾಣ್ ಅವರು 1,00,756 ಮತಗಳನ್ನ ಪಡೆದು ಜಯಗಳಿಸಿದ್ದರೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು 87,308 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ.

ನಾಲ್ಕು ಅವಧಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಕೈ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಾಸಿರ್ ಖಾನ್ ಪಠಾಣ್ ಯಶಸ್ವಿಯಾಗಿದ್ದಾರೆ

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios