ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶಕುಂತಲಾ ಕಾಮತ್ ಬುಧವಾರ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇನಾಯತ್ ಅಲಿ ಹಾಗೂ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಅವರ ಶಿಫಾರಸ್ಸಿನ ಮೇರೆಗೆ ಶಕುಂತಲಾ ಕಾಮತ್ ಅವರನ್ನು ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರನ್ನಾಗಿ ನೇಮಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಆದೇಶಿಸಿದ್ದಾರೆ.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೂತನ ಅಧ್ಯಕ್ಷೆ ಶಕುಂತಲಾ ಕಾಮತ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.
ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಶುಭೋದಯ ಆಳ್ವ, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್, ವಕ್ತಾರ ಗಣೇಶ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಆರಿಫ್ ಬಾವ, ಸಾರಿಕ ಪೂಜಾರಿ, ಮಹಿಳಾ ಕಾಂಗ್ರೆಸ್ ನ ಶಾಂತಲಾ ಗಟ್ಟಿ, ಶಶಿಕಲಾ ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.