ಮಂಗಳೂರು: ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಝೀನತ್ ಉಜಿರೆ ಶುಕ್ರವಾರ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಝೀನತ್ ಉಜಿರೆ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಗೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಿ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಆದೇಶಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಝೀನತ್ ಉಜಿರೆ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಾರಿಕ ಪೂಜಾರಿ, ಮಹಿಳಾ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಕಲಾ ಜೋಗಿ, ಜಯಲಕ್ಷ್ಮೀ ಅಡ್ಡೂರು, ಇಕ್ಬಾಲ್ ಮತ್ತಿತರರು ಉಪಸ್ಥಿತರಿದ್ದರು.