ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಜವಾಹರ್ ಬಾಲ್ ಮಂಚ್ ವಿಭಾಗಕ್ಕೆ ಜಿಲ್ಲಾಧ್ಯಕ್ಷರನ್ನಾಗಿ (ಮುಖ್ಯ ಸಂಯೋಜಕಿ) ಶೈಲಜಾ.ಕೆ ಅವರನ್ನು ನೇಮಿಸಿ ಎಐಸಿಸಿ ಜವಾಹರ್ ಬಾಲ್ ಮಂಚ್ ಅಧ್ಯಕ್ಷ ಡಾ.ಜಿ.ವಿ.ಹರಿ ಬುಧವಾರ ಆದೇಶಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶಿಫಾರಸ್ಸು ಮತ್ತು ಕೆಪಿಸಿಸಿ ಜವಾಹರ್ ಬಾಲ್ ಮಂಚ್ ಅಧ್ಯಕ್ಷ ಮೊಯ್ದೀನ್ ಅವರ ಅನುಮೋದನೆ ಮೇರೆಗೆ ನೇಮಕ ಮಾಡಲಾಗಿದೆ. ಈ ಕುರಿತು ರಾಷ್ಟ್ರೀಯ ಸಂಯೋಜಕ ಜೈ ಕುಮಾರ್ ಪಿಲ್ಲೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ನಿವಾಸಿಯಾಗಿರುವ ಶೈಲಜಾ.ಕೆ ಅವರು ವೃತ್ತಿಯಲ್ಲಿ ವಕೀಲೆಯಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ (ರಿ.) ಸಂಸ್ಥೆಯನ್ನು ಹುಟ್ಟುಹಾಕಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ ‘ಕಿತ್ತೂರು ರಾಣಿ ಚೆನ್ನಮ್ಮ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.