Thursday, April 10, 2025

ವಯನಾಡ್ ಸಂತ್ರಸ್ತರಿಗೆ ಇನ್ನೂ ಸಿಗದ ನೆರವು: ಕೇಂದ್ರದ ನಿರ್ಲಕ್ಷಕ್ಕೆ ಕೇರಳ ಸರ್ಕಾರ ಅಸಮಾಧಾನ

by eesamachara
0 comment
Wayanad-Kerala

ತ್ರಿಶೂರ್: “ಪ್ರಕೃತಿ ವಿಕೋಪಗಳಿಗೆ ತುತ್ತಾದ ಇತರ ರಾಜ್ಯಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಆದರೆ, ಕೇರಳವನ್ನು ಏಕೆ ಕಡೆಗಣಿಸಲಾಗುತ್ತಿದೆ?” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶ್ನಿಸಿದ್ದಾರೆ.

ಶನಿವಾರ ಚೇಲಕ್ಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎಲ್ಡಿಎಫ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳದ ವಯನಾಡ್ ನಲ್ಲಿ ಜುಲೈ ತಿಂಗಳಲ್ಲಿ ಸಂಭವಿಸಿದ ಭೂಕುಸಿತ ದುರಂತದ ಸಂತ್ರಸ್ತರ ಪುನರ್ವಸತಿಗೆ ಇದುವರೆಗೂ ನೆರವು ನೀಡಿದ ಕೇಂದ್ರ ಸರ್ಕಾರವು ವಿರುದ್ಧ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.

“ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನೂರಾರು ಮನೆಗಳು ನಾಶವಾದವು. ದುರಂತ ನಡೆದು ಹಲವು ತಿಂಗಳುಗಳಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ನೆರವು ದೊರೆತಿಲ್ಲ. ವಿಧಾನಸಭೆ ಅಂಗೀಕರಿಸಿದ ಸರ್ವಾನುಮತದ ನಿರ್ಣಯ ಸೇರಿದಂತೆ ಹಲವು ಮನವಿಗಳನ್ನು ಕಳುಹಿಸಿದ್ದರೂ ನೆರವು ದೊರೆತಿಲ್ಲ” ಎಂದು ಕೇಂದ್ರ ನಡೆಯನ್ನು ಸಿಎಂ ಖಂಡಿಸಿದ್ದಾರೆ.

ಕೇಂದ್ರದ ನಿರ್ಲಕ್ಷ: ಕೇರಳ ವಿಧಾನಸಭೆಯು ಭೂಕುಸಿತ ಪೀಡಿತ ವಯನಾಡಿಗೆ ನೆರವು ನೀಡಲು ವಿಳಂಬಿಸುತ್ತಿರುವ ಕೇಂದ್ರದ ವಿರುದ್ಧ ಅ.14ರಂದು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಹಣಕಾಸು ನೆರವನ್ನು ಒದಗಿಸಲು ಮತ್ತು ಭೂಕುಸಿತ ಸಂತ್ರಸ್ತರ ಬ್ಯಾಂಕ್ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಲು ಕೇಂದ್ರವು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ಣಯವು ಆಗ್ರಹಿಸಿತ್ತು. ಅಲ್ಲದೆ, ಜು.30ರಂದು ವಯನಾಡಿನ ಮೆಪ್ಪಾಡಿ ಪಂಚಾಯತ್ನ ಚೂರಲ್ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಪ್ರದೇಶಗಳಲ್ಲಿ ಸಂಭವಿಸಿದ್ದ ಭೂಕುಸಿತಗಳಿಂದ ಉಂಟಾಗಿರುವ ವಿನಾಶಗಳನ್ನು ವಿವರಿಸುವ ಜ್ಞಾಪಕ ಪತ್ರವನ್ನು ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಕೇಂದ್ರದಿಂದ ಯಾವುದೇ ತಕ್ಷಣದ ನೆರವು ದೊರಕಿಲ್ಲ. ಕೇಂದ್ರದಿಂದ ನೆರವು ಪಡೆಯುವಲ್ಲಿ ವಿಳಂಬವು ಭೂಕುಸಿತಗಳಲ್ಲಿ ಬದುಕುಳಿದವರ ಪುನರ್ವಸತಿಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ ಎಂದು ಕೇರಳದ ಜನತೆ ಕೇಂದ್ರ ಸರ್ಕಾರದ ನಿರ್ಲಕ್ಷದ ಬಗ್ಗೆ ಅಸಮಾಧಾನಗೊಂಡಿದ್ದಾರೆ.



You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios