Monday, December 23, 2024

ಶಿಗ್ಗಾಂವಿ ಬೈ ಎಲೆಕ್ಷನ್​ ರಿಸಲ್ಟ್ ಗಿಫ್ಟ್: ಹೆಸ್ಕಾಂ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ನೇಮಕ

by eesamachara
0 comment

ಬೆಂಗಳೂರು: ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್​ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ(ಹೆಸ್ಕಾಂ)ನಿಯಮಿತದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆ ಟಿಕೆಟ್‌ ಗಾಗಿ ಅಜ್ಜಂಪೀರ್ ಖಾದ್ರಿ ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಹೈಕಮಾಂಡ್ ಯಾಸೀರ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದ ಸಿಡಿದೆದ್ದಿದ್ದ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಬಳಿಕ ಸಚಿವ ಝಮೀರ್ ಅಹಮ್ಮದ್ ಖಾನ್ ಮನವೊಲಿಸಲು ಪ್ರಯತ್ನಿಸಿದ್ದರು. ಕೊನೆಗೆ ಅಜ್ಜಂಪೀರ್ ಖಾದ್ರಿ ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದು ಸಂಧಾನ ಮಾಡಿದ್ದರು. ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿ ಮನವೊಲಿಸಿದ್ದರು.

ಬಳಿಕ ಸಿದ್ದರಾಮಯ್ಯ ಮಾತಿಗೆ ಬೆಲೆ ಕೊಟ್ಟು ಅಜ್ಜಂಪೀರ್ ಖಾದ್ರಿ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. ಅಲ್ಲದೇ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ಯಾಸೀರ್ ಖಾನ್ ಪಠಾಣ್ ಅವರ ಪರವಾಗಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ಅಜ್ಜಂಪೀರ್ ಖಾದ್ರಿ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಸಿದ್ದರಾಮಯ್ಯ ಅವರು  ಕೊಟ್ಟ ಭರವಸೆಯನ್ನು ಫಲಿತಾಂಶ ಪ್ರಕಟವಾದ ಎರಡನೇ ದಿನದಲ್ಲಿ ಈಡೇರಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios