ಫರಂಗಿಪೇಟೆ: ಪುದು ಗ್ರಾಮ ವ್ಯಾಪ್ತಿಯ ಅಮ್ಮೆಮ್ಮಾರ್ ಕಿದೆಬೆಟ್ಟುವಿನಲ್ಲಿ ವಾಸವಾಗಿರುವ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆಮ್ಮಾರ್ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದು, ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.
ಈತ ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ್ದಾನೆ. ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಲಭಿಸಿದೆ ಎಂದು ತಿಳಿದು ಬಂದಿದೆ.