Thursday, June 5, 2025

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ | ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗ ಭರ್ಜರಿ ಗೆಲುವು

by eesamachara
0 comment


ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ, ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ ಎಂದು ವರದಿಗಳಾಗಿವೆ.


2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಬಳಿಕ, ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.
ಹೀಗಾಗಿ, ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್​ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಆಪ್ತ, ಪಕ್ಷಕ್ಕೆ ನಿಷ್ಠಾವಂತನಾಗಿರುವ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios