ಮುಡಿಪು: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವೆನ್ ಲಾಕ್ ಆಸ್ಪತ್ರೆ ರಕ್ತನಿಧಿ ವಿಭಾಗ, ಕಾರವಾರ ಕಲ್ಲೂರು ಎಜುಕೇಷನ್ ಟ್ರಸ್ಟ್ (ರಿ.) ಇದರ ಸಂಯುಕ್ತಾಶ್ರಯದಲ್ಲಿ ಯೂತ್ ರೆಡ್ ಕ್ರಾಸ್, ರೋವರ್ಸ್, ರೇಂಜರ್ಸ್ ಘಟಕ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಇದರ ಸಹಯೋಗದೊಂದಿಗೆ ರಕ್ತದಾನ ಹಾಗೂ ಮಾಹಿತಿ ಶಿಬಿರ ಇತ್ತೀಚಿಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಶ್ರೇಷ್ಠ ದಾನಗಳಲ್ಲಿ ರಕ್ತದಾನ ಕೂಡ ಒಂದು. ಇದನ್ನು ದಾನಿಗಳಿಂದ ಸಂಗ್ರಹಿಸಿ ತುರ್ತು ಸಂದರ್ಭದಲ್ಲಿ ಇನ್ನೊಬ್ಬರ ಜೀವ ಉಳಿಸಲು ಸಹಕಾರಿ ಆಗಲಿದೆ ಎಂದರು.
ಕಾರವಾರ ಕಲ್ಲೂರು ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹೀಂ ಕಲ್ಲೂರು ಮಾತನಾಡಿ, ಕಾರವಾರದಲ್ಲಿ ಬಡವರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಬೇಕು ಎಂಬ ಮಹದಾಸೆಯೊಂದಿಗೆ ಸ್ಥಾಪಿಹಿದ ಶಿಕ್ಷಣ ಸಂಸ್ಥೆಯಲ್ಲಿ ಈಗ ಸಾವಿರಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ನಮಗೆ ಅಭಿಮಾನ ಎಂದು ಸ್ಮರಿಸಿದರು.
ಈ ಸಂದರ್ಭ ಒಟ್ಟು 45 ರಕ್ತ ಸಂಗ್ರಹಿಸಲಾಯಿತು. ರಕ್ತದಾನಿಗಳಿಗೆ ಕಲ್ಲೂರು ಟ್ರಸ್ಟ್ ವತಿಯಿಂದ ಟೀ ಶರ್ಟ್ ವಿತರಿಸಲಾಯಿತು.
ಸಭೆಯಲ್ಲಿ ಪ್ರಾಂಶುಪಾಲರಾದ ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಕ್ತದಾನದ ಬಗ್ಗೆ ವೆನ್ ಲಾಕ್ ಆಸ್ಪತ್ರೆ ಅಧಿಕಾರಿ ಆಂಟನಿ ಡಿಸೋಜಾ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶೇಷಪ್ಪ.ಕೆ, ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಕವಿತಾ ಎಂ.ಎಲ್, ರೋವರ್ಸ್ ಘಟಕದ ಸಂಚಾಲಕ ಮಹಮ್ಮದ್ ರಫೀಕ್, ಆರೋಗ್ಯ ಶಿಬಿರದ ಸಂಯೋಜಕ, ಕಲ್ಲೂರು ಎಜುಕೇಷನ್ ಟ್ರಸ್ಟ್ ನ ಟ್ರಸ್ಟಿ ಅಝೀಝ್ ಕಲ್ಲೂರು, ಮಾಧ್ಯಮ ವಿಭಾಗದ ಕಾರ್ಯದರ್ಶಿ ಉಮ್ಮರ್ ಸಾಲೆತ್ತೂರು ಮತ್ತಿತರರು ಉಪಸ್ಥಿತರಿದ್ದರು.
ಯುವ ರೆಡ್ ಕ್ರಾಸ್ ಸಂಸ್ಥೆ ಮುಖ್ಯಸ್ಥ ಹೈದರಾಲಿ ಸ್ವಾಗತಿಸಿದರು. ರೇಂಜರ್ಸ್ ಘಟಕದ ಸಂಚಾಲಕಿ ಅಕ್ಷತಾ ಸುವರ್ಣ ಅಕ್ಷತಾ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಮುಖಂಡ ಶಹೀದ್ ವಂದಿಸಿದರು.

