ಮಂಗಳೂರು: ರಾಜ್ಯದ ಇತಿಹಾಸದಲ್ಲೇ 75 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಮಂಗಳೂರು ಸಿಸಿಬಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಮಂಗಳೂರು ಸಾಮರಸ್ಯ ವೇದಿಕೆ ವತಿಯಿಂದ ಅಭಿನಂದಿಸಲಾಯಿತು.
ಸಿಸಿಬಿ ಅಧಿಕಾರಿಗಳಾದ ಮನೋಜ್ ಕುಮಾರ್, ರಫೀಕ್, ಸುದೀಪ್, ಶರಣಪ್ಪ, ನರೇಂದ್ರ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.
ಈ ಸಂಧರ್ಭ ಮಂಗಳೂರು ಸಾಮರಸ್ಯ ವೇದಿಕೆ ಅಧ್ಯಕ್ಷೆ ಮಂಜುಳಾ ನಾಯಕ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್, ಪದಾಧಿಕಾರಿಗಳಾದ ನೀತ್ ಶರಣ್, ರಾಜೇಶ್ ದೇವಾಡಿಗ, ಯೋಗೀಶ್ ನಾಯಕ್, ಟಿ.ಸಿ ಗಣೇಶ್, ಜಯರಾಜ್ ಕೋಟಿಯಾನ್, ವಿದ್ಯಾ ಶೆಣೈ, ಮಮತಾ ಕುಡ್ವ, ರಾಧಿಕಾ ನಾಯಕ್ ಮತ್ತಿತರು ಉಪಸ್ಥಿತರಿದ್ದರು.


