ಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ.
ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಾಲತಿ ಎಸ್, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪ್ರೇಮಲತಾ, ಇಳಂತಿಲ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ರೀಮತಿ ಕುಸುಮ ಈಶ್ವರ ಗೌಡ ಅವರು ಜಯಗಳಿಸಿದ್ದಾರೆ.