Monday, December 23, 2024

ಸಂವಿಧಾನದ ತಿರುಳು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ಬಸವರಾಜ ಹೊರಟ್ಟಿ

ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್‌ ಸಂಸ್ಥೆಯಿಂದ ಸಂವಿಧಾನದ ಅಮೃತ ಮಹೋತ್ಸವ ಕಾರ್ಯಕ್ರಮ

by eesamachara
0 comment

ಬೆಂಗಳೂರು: ದೇಶದ ಸಂವಿಧಾನದ ತಿರುಳನ್ನು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿರುವ ನಮ್ಮ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್‌ ಸಂಸ್ಥೆಯವರು ಶಾಸಕರ ಭವನದಲ್ಲಿ ಆಯೋಜಿಸಿದ್ದ ಸಂವಿಧಾನಕ್ಕೆ ೭೫ನೇ ವರ್ಷ – ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಿ.ಆರ್.‌ ಅಂಬೇಡ್ಕರ್‌ ಭಾರತದಲ್ಲಿ ಹುಟ್ಟಿರದಿದ್ದರೆ, ನಮ್ಮ ಸಂವಿಧಾನದಲ್ಲಿರುವ ಪರಿಕಲ್ಪನೆಯೇ ಇರುತ್ತಿರಲಿಲ್ಲ. ಅವರು ನೀಡಿರುವ ಸಂವಿಧಾನ ಸ್ವತಂತ್ರ ಭಾರತದ ಮೈಲಿಗಲ್ಲು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸಿ ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅವರು ಹೇಳಿದರು. ಸಂವಿಧಾನದ ವಿಚಾರಗಳನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್‌ ಸಂಸ್ಥೆಗೆ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.
ಇದೇ ವೇಳೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಿಸಲ್ಪಟ್ಟಿರುವ “ಮನೆ ಮನಕ್ಕೆ ಸಂವಿಧಾನ” ಡಾಕ್ಯೂ ಡ್ರಾಮಾ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್‌ ಪ್ರಸ್ತುತಿಯ ಸಂವಿಧಾನ ಗೀತೆಯನ್ನು ಬಿಡುಗಡೆಗೊಳಿಸಲಾಯಿತು.
ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್‌ ಪಟ್ಟಣ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಮಾತನಾಡಿದರು. ವಿಧಾನ ಪರಿಷತ್‌ ಸದಸ್ಯ ಎಸ್.ವಿ. ಸಂಕನೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂವಿಧಾನ ಕುರಿತು ಸಂದೇಶ ನೀಡಿದರು. ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ ಕೆ.ಆರ್.‌ ಮಹಾಲಕ್ಷ್ಮಿ, ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ ಎಸ್.ನಿರ್ಮಲಾ, ವಿಧಾನಸಭೆ ಸಚಿವಾಲಯದ ಉಪಕಾರ್ಯದರ್ಶಿ ಮೊಹಮ್ಮದ್‌ ಗೌಸ್‌ ಕೆ., ವಿಧಾನ ಪರಿಷತ್ತು ಸಚಿವಾಲಯದ ಅಧೀನ ಕಾರ್ಯದರ್ಶಿ ಮೀನಾ ನಾಯಕ್‌, ವಿಧಾನಸೌಧ ಭದ್ರತಾ ವಿಭಾಗದ ಉಪ ಪೊಲೀಸ್‌ ಆಯುಕ್ತ ಎಂ.ಎನ್.‌ ಕರಿಬಸವನಗೌಡ ಮುಂತಾದವರು ವೇದಿಕೆಯಲ್ಲಿದ್ದರು.
ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್‌ನ ಪ್ರಧಾನ ನಿರ್ದೇಶಕ ಅರುಣ ಕುಮಾರ್ ನಾಗರಾಜ್ ದಿವಾಣಜಿ, ಯೋಜನೆಯ ವ್ಯವಸ್ಥಾಪಕ ಕನ್ನಾಯಕನಹಳ್ಳಿ ಕುಮಾರ್ ರಾಮೇಗೌಡ, ಸಂಚಾಲಕರುಗಳಾದ ಎಚ್. ಸತೀಶ್ ಕುಮಾರ್, ಸಿದ್ದಲಿಂಗ ಮೂರ್ತಿ, ಬಿ.ಆರ್. ಬೀರೇಶ್, ಸಂಯೋಜಕರುಗಳಾದ ಸುರೇಶ್ ಪಿ.ಬಿ., ಶರಣಕುಮಾರ್ ದಿವಾಣಜಿ ಉಪಸ್ಥಿತರಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios