Wednesday, May 21, 2025

ಮಂಗಳೂರು| ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮಾಜಕ್ಕೆ ಮೀಸಲಾತಿ ನೀಡಲು ಒತ್ತಾಯ

by eesamachara
0 comment

ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ವಿಶ್ವಕರ್ಮ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಸಮಾಜದ ಮುಖಂಡರು ಇತ್ತೀಚಿಗೆ ಜಿಲ್ಲಾ ಉಸ್ತುವಾರಿ ಸಚಿವರದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಹಕಾರಿ ಸಚಿವರಿಗೆ ಮನವಿ ಸಲ್ಲಿಸಿದರು.

ಕೋ-ಆಪರೇಟಿವ್ ಸೊಸೈಟಿಗಳ ಆಡಳಿತ ಮಂಡಳಿಯಲ್ಲಿ ವಿಶ್ವಕರ್ಮ ಸಮಾಜದವರಿಗೆ ಒಂದು ಸ್ಥಾನವನ್ನು ವಿಸಲು (ಚುನಾಯಿತ ಅಥವಾ ನಾಮ ನಿರ್ದೇಶಿತ ಸ್ಥಾನ) ಮತ್ತು ಸಹಕಾರ ಕ್ಷೇತ್ರದ ಉದ್ಯೋಗದಲ್ಲಿ ಶೇ.5ರಷ್ಟು ಒಳ ಮೀಸಲಾತಿಯನ್ನು ನಿಗದಿ ಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಓಬಿಸಿ ರಾಜ್ಯ ಪ್ರಧಾನಕಾರ್ಯದರ್ಶಿ ಉದಯ ಜಿ ಆಚಾರ್ಯ, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ, ಪಂಚಾಯತ್ ಸದಸ್ಯ ಪ್ರಭಾಕರ್ ಆಚಾರ್ಯ ಕಟಪಾಡಿ, ಉಪೇಂದ್ರ ಆಚಾರ್ಯ ಪೆರ್ಡೂರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಆಚಾರ್ಯ ಮೂಡಬಿದ್ರಿ, ಸೇವಾದಳ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಅಶೋಕ್ ಆಚಾರ್ಯ ಸಿದ್ದಕಟ್ಟೆ, ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರ್ಚನಾ ಆಚಾರ್ಯ, ಪಿ.ಆರ್ ಗೋಪಾಲಕೃಷ್ಣ ಆಚಾರ್ಯ, ಹರೀಶ್ ಆಚಾರ್ಯ ಮಂಗಳೂರು, ವಸಂತ್ ಆಚಾರ್ಯ ಮಂಜನಾಡಿ, ವಿವೇಕ್ ಆಚಾರ್ಯ ಕೃಷ್ಣಾಪುರ, ಶೋಭಾ ಆಚಾರ್ಯ ಪುತ್ತೂರು ಉಪಸ್ಥಿತರಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios