ಮಂಗಳೂರು: ದಕ್ಷಿಣ ಕನ್ನಡ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ದಿನೇಶ್ ಮೂಳೂರು ಅವರು ನೇಮಕಗೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಸಂಚಾಲಕ ಕೆ.ರಾಜು, ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಜೇಶ್ ಲಿಲೋತಿ ಅವರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ದಿನೇಶ್ ಮೂಳೂರು ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಕೆಸಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಧರ್ಮಸೇನ ಆದೇಶಿಸಿದ್ದಾರೆ.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಾಗಿರುವ ದಿನೇಶ್ ಮೂಳೂರು ಅವರು ಮುಡಿಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ.