Friday, June 6, 2025

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ಇದು ಗ್ಯಾರಂಟಿ, ಅಭಿವೃದ್ಧಿಯ ಗೆಲುವು ಎಂದ ಡಿ.ಕೆ.ಶಿವಕುಮಾರ್

by eesamachara
0 comment

ಬೆಂಗಳೂರು: ರಾಜ್ಯದ ಎಲ್ಲ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.

ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವುವಾಗಿದೆ” ಎಂದು ಬಣ್ಣಿಸಿದ್ದಾರೆ.

“ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು ಇದಾಗಿದೆ” ಎಂದು ಡಿಕೆಶಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios