Saturday, April 19, 2025

ನಾಳೆ ಮಂಗಳೂರು ನೆಹರು ವಿಚಾರ ವೇದಿಕೆಯಿಂದ ‘ಗಾಂಧಿ-ಅಂಬೇಡ್ಕರ್-ನೆಹರು’ ವಿಚಾರಗೋಷ್ಠಿ

by eesamachara
0 comment

ಮಂಗಳೂರು: ಮಂಗಳೂರು ನೆಹರು ವಿಚಾರ ವೇದಿಕೆ ವತಿಯಿಂದ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜವಾಹರ‌ಲಾಲ್ ನೆಹರು ಅವರ ಕುರಿತಾಗಿ ‘ಸ್ವಾತಂತ್ರ್ಯ-ಸಂವಿಧಾನ-ದೂರದೃಷ್ಟಿ’ ವಿಷಯದಲ್ಲಿ ವಿಚಾರಗೋಷ್ಠಿಯನ್ನು ನಾಳೆ (ಫೆ.18) ಬೆಳಿಗ್ಗೆ 10ಕ್ಕೆ ನಗರದ ಊರ್ವದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ವಕ್ತಾರ ಮುನೀರ್ ಜನ್ಸಾಲೆ ವಿಷಯ ಮಂಡಿಸಲಿದ್ದಾರೆ. ಬಳಿಕ ‘ಗಾಂಧಿ ಮತ್ತು ಸ್ವಾತಂತ್ರ್ಯ’ ವಿಷಯದ ಕುರಿತು ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ, ‘ಅಂಬೇಡ್ಕರ್ ಮತ್ತು ಸಂವಿಧಾನ’ ವಿಷಯದ ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹಾಗೂ ‘ನೆಹರು ಮತ್ತು ದೂರದೃಷ್ಟಿ’ ವಿಷಯದ ಕುರಿತು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರು ವಿಚಾರ ಮಂಡಿಸಲಿದ್ದಾರೆ.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕ ಅಶೋಕ್ ಕುಮಾರ್ ರೈ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂದೀಪ್ ಬಿ.ಎಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಅಧ್ಯಕ್ಷ ಡಾ| ಯು.ಟಿ.ಇಫ್ತಿಕಾರ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಬೆಂಗಳೂರು ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಅನಂತ ನಾಯ್ಕ, ದ.ಕ.ಜಿಲ್ಲಾ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಅವರು ಭಾಗವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್, ಮುಖ್ಯಮಂತ್ರಿ ಪ್ರಶಸ್ತಿ ವಿಜೇತ ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ ಬೆಂಗಳೂರು, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಲಾ ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಮ.ನ.ಪಾ ವಿಪಕ್ಷ ನಾಯಕ ಅನಿಲ್ ಕುಮಾರ್, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ, ಮಾನವ ಬಂಧುತ್ವ ವೇದಿಕೆಯ ದ.ಕ.ಜಿಲ್ಲಾ ಪ್ರಧಾನ ಸಂಚಾಲಕ ಜಯರಾಮ್ ಪೂಜಾರಿ, ಕೊಡಗು ಜಿಲ್ಲೆಯ ಪ್ರಧಾನ ಸಂಚಾಲಕ ಜನಾರ್ಧನ ಕೆ.ಎಲ್, ಬಂಟ್ವಾಳ ತಾಲೂಕಿನ ಪ್ರಧಾನ ಸಂಚಾಲಕ ಕೇಶವ ಪೂಜಾರಿ ಪಂಜಿಕಲ್ಲು ಹಾಗೂ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮೋಹನ್ ಶೆಟ್ಟಿ ಪಂಜಿಕಲ್ಲು ಅವರು ಉಪಸ್ಥಿತರಿರಲಿದ್ದಾರೆ ಎಂದು ಮಂಗಳೂರು ನೆಹರು ವಿಚಾರ ವೇದಿಕೆ ಮುಖ್ಯಸ್ಥ ನವೀನ್ ರೈ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios