Monday, December 23, 2024

ಸರ್ಕಾರಿ ನೌಕರ, ತೆರಿಗೆ ಪಾವತಿದಾರರ BPL ಕಾರ್ಡ್ ಮಾತ್ರ​ ರದ್ದು: ಆಹಾರ ಇಲಾಖೆ ಮಾರ್ಗಸೂಚಿ

by eesamachara
0 comment

ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಬಿಟ್ಟು ಇತರರ ಬಿಪಿಎಲ್ ರದ್ದು ಮಾಡದಿರಲು ಆಹಾರ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಆಹಾರ ಇಲಾಖೆ ಆಯುಕ್ತರು, ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಯನ್ನು ನೀಡಲು ಸರ್ಕಾರದಿಂದ ನಿಗದಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ, ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮಗಳನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಪತ್ರದಲ್ಲಿ ನಿರ್ದೇಶಿಸಲಾಗಿತ್ತು. ಇದೀಗ ಈ ಸಂಬಂಧ ಕೆಲ ಮಾರ್ಗಸೂಚಿಯನ್ನು ಇಲಾಖೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್​ನಲ್ಲಿ ಅವಕಾಶ ನೀಡಲಾಗಿದೆ. ನೋಡಲ್ ಅಧಿಕಾರಿ ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದ್ದು ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಲಾಗಿದೆ.

ಹೀಗೆ ಮರುಸ್ತಾಪನೆಗೊಂಡಿರುವ ಪಿಹೆಚ್​ಹೆಚ್​(PHH) ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು ಎನ್​ಐಸಿ(NIC) ಸಹಯೋಗದೊಂದಿಗೆ 25/11/2024ರೊಳಗೆ ಜಂಟಿ ನಿರ್ದೇಶಕರು ಕ್ರಮವಹಿಸಬೇಕು. ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ಕ್ರಮ ವಹಿಸಬೇಕು. ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು, ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸಬೇಕು ಎಂದು ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios