Thursday, June 26, 2025

ಕುಡುಪು ಗುಂಪು ಹತ್ಯೆ ಪ್ರಕರಣ: ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

by eesamachara
0 comments

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣವನ್ನು ಸಿಒಡಿ(ಸಿಐಡಿ) ತನಿಖೆ ನಡೆಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಮೃತ ದೇಹದ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗಳು ಉಂಟಾಗಿರುವುದು ಕಂಡುಬಂದರೂ ಸಹ ಪೊಲೀಸ್ ಇಲಾಖೆ ಕೂಡಲೇ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳದೆ ಪ್ರಕರಣವನ್ನು ಯುಡಿಆರ್ ಪ್ರಕರಣವೆಂದು ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅನುಮಾನ ಮತ್ತು ಆಕ್ರೋಶ ವ್ಯಕ್ತವಾದ ನಂತರ ಕೊಲೆ ಪ್ರಕರಣ ಎಂದು ದಾಖಲಿಸಲಾಗಿದೆ. 24 ಗಂಟೆ ಕಳೆದ ನಂತರವೇ ಇಂತಹ ಗಂಭೀರ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ(ಸಿಐಡಿ) ತನಿಖೆ ನಡೆಸಿ, ನೈಜ ಆರೋಪಿಗಳನ್ನು ಪತ್ತೆ ಹಚ್ಚಬೇಕು” ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಇನಾಯತ್ ಅಲಿ ಒತ್ತಾಯಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios