ಮುಂಬೈ: ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಷ್ಟಾಚಾರಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಅದನ್ನು ಧರ್ಮದಡಿ ಸರಿಪಡಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶಂಕರಾಚಾರ್ಯರು ಇದರ ಪಾವಿತ್ರ್ಯವನ್ನು ವಿರೋಧಿಸಿದ್ದು, ನಿಮಗೆ ಗೊತ್ತೇ ಇದೆ. ಆದ್ದರಿಂದ, ನಾಲ್ವರು ಶಂಕರಾಚಾರ್ಯರು ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ. ಸರಿಯಾದ ಸ್ಥಳದಲ್ಲಿ ರಾಮದರ್ಬಾರ್ ಸ್ಥಾಪಿಸಲಾಗುವುದು” ಎಂದು ಹೇಳಿದರು.
“ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸುವುದು ಭಗವಾನ್ ರಾಮನ ವಿಗ್ರಹವಲ್ಲ, ರಾಮಲಾಲಾ ಮಗುವಿನ ರೂಪ. ರಾಮ ಮಂದಿರ ನಿರ್ಮಾಣದಲ್ಲಿ ನರೇಂದ್ರ ಮೋದಿ ಶಿಷ್ಟಾಚಾರಕ್ಕೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ” ಎಂದರು.