ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ಪ್ರಯುಕ್ತ ಇಂದಿರಾ ಗಾಂಧಿ ಜನ್ಮದಿನ ಆಚರಣಾ ಸಮಿತಿ ವತಿಯಿಂದ ಇತ್ತೀಚಿಗೆ ಪಾಂಡೇಶ್ವರದ ಸೈಂಟ್ ಆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ’ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು.
ವಿವಿಧ ಶಾಲಾ-ಕಾಲೇಜುಗಳಿಂದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದರು.
ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಹ್ಯಾರಿ ಡಿಸೋಜ, ಸಂಚಾಲಕಿ ಮಂಜುಳಾ ನಾಯಕ್, ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಕಂದಕ್, ಸಮಿತಿಯ ಸಹ ಸಂಚಾಲಕರಾದ ಮೊಹಮ್ಮದ್ ಕುಂಜತ್ತಬೈಲ್, ನೀತ್ ಶರಣ್, ರಾಜೇಶ್ ದೇವಾಡಿಗ, ಟಿ.ಸಿ ಗಣೇಶ್, ಯೋಗೀಶ್ ನಾಯಕ್, ಶಿಕ್ಷಕರಾದ ಸಂಧ್ಯಾ ಅಲ್ವಾ, ಭಾನುಪ್ರಿಯ, ಆಫ್ರಿನ, ಪ್ರಭಾವತಿ, ಸಮರ್ಥ್ ಭಟ್ ಉಪಸ್ಥಿತರಿದ್ದರು.
ವಿಜೇತ ವಿದ್ಯಾರ್ಥಿಗಳಿಗೆ ನ.19ರಂದು ನಗರದಲ್ಲಿ ಆಯೋಜಿಸಲಾದ ಇಂದಿರಾ ಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.