ಮಂಗಳೂರು: ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲಾಡಳಿತದ ವತಿಯಿಂದ ನೀಡುವ 2024ನೇ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಅಡ್ಡೂರು ಫೈವ್ ಸ್ಟಾರ್ ಯಂಗ್ ಬಾಯ್ಸ್ ಸಂಸ್ಥೆಗೆ (ರಿ.) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು.
ಇಂದು ಬೆಳಗ್ಗೆ ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಫೈವ್ ಸ್ಟಾರ್ ಅಧ್ಯಕ್ಷ ಹಬೀಬ್ ಕಟ್ಟಪುಣಿ ಅವರು ಸಂಸ್ಥೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ ಒಟ್ಟು 57 ಸಾಧಕರು ಹಾಗೂ 24 ಸಾಧಕ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕೋಡಿಕಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಡ ಅಧ್ಯಕ್ಷ ಸದಾಶಿವ್ ಉಳ್ಳಾಲ್, ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.