Monday, December 23, 2024

ಬೆಂಗ್ರೆಕಸಬ ಸರಕಾರಿ ಶಾಲೆಯ ದತ್ತು ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

by eesamachara
0 comment
bhandary foundation

ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು ಸ್ವೀಕರಿಸಿದ್ದಾರೆ.

“ಇದು ರಾಜ್ಯದ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ದತ್ತು ಸ್ವೀಕಾರ ಆಗಿದೆ. ಈ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತಮ ವಾತಾವರಣ ನಿರ್ಮಿಸುವುದರ ಜೊತೆಗೆ ಹೊಸ ಕಟ್ಟಡ, ವಿದ್ಯುತ್, ಸ್ವಚ್ಛ ನೀರು, ಕ್ರೀಡಾ ಸೌಲಭ್ಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುತ್ತೇವೆ” ಎಂದು ಭಂಡಾರಿ ಫೌಂಡೇಶನ್ ಸ್ಥಾಪಕ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

“ಬೆಂಗ್ರೆ ಕಸಬ ಸರಕಾರಿ ಶಾಲೆಗೆ 60ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಶಾಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 800ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ನಮ್ಮ ಬಹುಕಾಲದ ಬೇಡಿಕೆಯನ್ನು ಶಾಸಕ ಮಂಜುನಾಥ ಭಂಡಾರಿ ಈಡೇಸಿರಿದ್ದು, ಇಲ್ಲಿನ ಜನತೆ ಅವರಿಗೆ ಅಭಾರಿಯಾಗಿರುತ್ತೇವೆ” ಎಂದು ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕಾಧ್ಯಕ್ಷ ಲಾರೆನ್ಸ್ ಡಿ’ಸೋಜ, ಅಶ್ರಫ್ ಬೆಂಗ್ರೆ, ಶಾಲಾ ಮುಖ್ಯಶಿಕ್ಷಕಿಗಳಾದ ಶೋಭಾ.ಬಿ,  ಸಂತೋಷ್ ಕುಮಾರಿ ಉಪಸ್ಥಿತರಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios