Monday, December 23, 2024

ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

by eesamachara
0 comment

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಇನ್ಸ್ ಪೆಕ್ಟರ್​ಗಳಾದ ಮಧುಸೂದನ್ ಹಾಗೂ ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳು ದಾವಣಗೆರೆ ನಗರದ ಶಕ್ತಿನಗರದ 3ನೇ ಕ್ರಾಸ್​ನಲ್ಲಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯ ನಿರ್ದೇಶಕ ಕಮಲ್ ರಾಜ್ ಮನೆಯ ಮೇಲೆ ಮಾಡಿ ಪರಿಶೀಲನೆ ನಡೆಸಲಾಗಿದೆ.

ಧಾರವಾಡದಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.  ಮನೆ ಎದುರಿನಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಲ್ಲೂ ಪರಿಶೀಲನೆ ನಡೆಸಿದ್ದಾರೆ. ಗೋವಿಂದಪ್ಪ ಭಜಂತ್ರಿಗೆ ಸೇರಿದ ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್​ಹೌಸ್ ಧಾರವಾಡದ ತೇಜಸ್ವಿನಗರ ಬಡಾವಣೆಯ ಅಳಿಯನ ಮನೆ, ಲಕ್ಕಮನಹಳ್ಳಿ ಬಡಾವಣೆ ಕೆಐಎಡಿಬಿ ಕಚೇರಿ, ನರಗುಂದದಲ್ಲಿರುವ ಸಹೋದರನ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಿದ್ದಾರೆ. ರವೀಂದ್ರ ರೊಟ್ಟೆ ಈ ಹಿಂದೆ ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರೆಸ್ತಾದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಮೈಸೂರು ನಗರ ಪಾಲಿಕೆಯ ವಲಯ ಆಯುಕ್ತ ನಾಗೇಶ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀರಂಗಪಟ್ಟಣದಲ್ಲಿರುವ ನಾಗೇಶ್​ ಅವರಿಗೆ ಸೇರಿದ ಮತ್ತೊಂದು ಮನೆ ಮೇಲೂ ಲೋಕಾಯುಕ್ತ ಪರಿಶೀಲನೆ ನಡೆಸಿದೆ. ನಾಗೇಶ್ ಹಿಂದೆ ಶ್ರೀರಂಗಪಟ್ಟಣ ತಹಶೀಲ್ದಾರ್ ಆಗಿದ್ದರು.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿಠ್ಠಲ್ ಡವಳೇಶ್ವರ ಈ‌ ಹಿಂದೆ ಅಕ್ರಮವಾಗಿ 1.10 ಕೋಟಿ ಹಣವನ್ನು ಚಿಕ್ಕೋಡಿಯಿಂದ ಬಾಗಲಕೋಟೆಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios