Monday, December 23, 2024

ದಕ್ಷಿಣ ರಾಜ್ಯಗಳ ನಿರ್ಲಕ್ಷ, ಗುಜರಾತ್​ ಬಗ್ಗೆ ಎಲ್ಲಿಲ್ಲದ ಒಲವು : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by eesamachara
0 comment
narendra modi

 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ತವರು ರಾಜ್ಯ ಗುಜರಾತ್ ಬಗ್ಗೆ ಎಲ್ಲಿಲ್ಲದ ಅಭಿಮಾನ, ಹೀಗಾಗಿ ಪ್ರಮುಖ ಯೋಜನೆಗಳ ವಿಚಾರದಲ್ಲಿ ದಕ್ಷಿಣದ ರಾಜ್ಯಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಪ್ರಧಾನಿ ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಪ್ರಮುಖ ಹೂಡಿಕೆಗಳನ್ನು (ಸೆಮಿಕಂಡಕ್ಟರ್ ಪ್ಲಾಂಟ್‌ಗಳಿಂದ ಪ್ರಮುಖ ಉತ್ಪಾದನಾ ಕೇಂದ್ರಗಳವರೆಗೆ) ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ರಾಜ್ಯಗಳಿಂದ ದೂರವಿಡಲಾಗಿದೆ ಮತ್ತು ವಿಶೇಷ ಸಬ್ಸಿಡಿಗಳು ಮತ್ತು ಪ್ರೋತ್ಸಾಹ ಧನಗಳೊಂದಿಗೆ ಗುಜರಾತ್‌ಗೆ ಹಸ್ತಾಂತರಿಸಲಾಗಿದೆ. ಇದು ಮೋದಿ ಅವರ ಎಲ್ಲಿಲ್ಲದ ಗುಜರಾತ್ ಒಲವನ್ನು ತೋರಿಸುತ್ತದೆ” ಎಂದು ತಿಳಿಸಿದ್ದಾರೆ.

“ನಮ್ಮ ಕರ್ನಾಟಕದ ಬಿಜೆಪಿ ಸಂಸದರು ಮೌನವಾಗಿದ್ದಾರೆ. ಕರ್ನಾಟಕದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಬಗೆಗಿನ ಈ ನಿರ್ದಾಕ್ಷಿಣ್ಯ ನಿರ್ಲಕ್ಷವನ್ನು ಪ್ರಶ್ನಿಸಲು ಅವರಿಂದ ಆಗುತ್ತಿಲ್ಲ.” ಎಂದು ಯೋಜನೆಗಳ, ಅನುದಾನದ ವಿಚಾರದಲ್ಲಿ ಕೇಂದ್ರದಲ್ಲಿ ಧ್ವನಿಯೆತ್ತದ ರಾಜ್ಯ ಬಿಜೆಪಿ ಸಂಸದರ ನಡೆಯನ್ನೂ ಕೂಡ ಸಿಎಂ ಪ್ರಶ್ನಿಸಿದ್ದಾರೆ.

“ಮೋದಿಯವರ ‘ಹೆಲಿಕಾಪ್ಟರ್ ರಾಜತಾಂತ್ರಿಕತೆ’ಗೆ ಗುಜರಾತಿನ ಸೇವೆಗೆ ಮಾತ್ರ ಅವಕಾಶ ಮಾಡಿಕೊಟ್ಟು ನಮ್ಮ ರಾಜ್ಯವನ್ನು ಬದಿಗೊತ್ತಿ ಬಿಡುತ್ತಾರೆ. ಬಿಜೆಪಿ ಸಂಸದರ ಮೌನ ಕರ್ನಾಟಕದ ಹಿತಾಸಕ್ತಿಗಳಿಗೆ ಬಗೆದ ದ್ರೋಹವಾಗಿದೆ. ಅವರು ಮೌನವನ್ನು ಮುರಿದು, ನಮ್ಮ ರಾಜ್ಯದ ಪರವಾಗಿ ಮಾತನಾಡುವ, ಕರ್ನಾಟಕ ಮತ್ತು ದಕ್ಷಿಣ ಭಾರತಕ್ಕೆ ನ್ಯಾಯಸಮ್ಮತ ಮತ್ತು ಸಮಾನ ಅವಕಾಶವನ್ನು ಕೋರುವ ಸಮಯ ಇದಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/siddaramaiah/status/1855152148658765908

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios