ನವದೆಹಲಿ: ಇಂದು ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನ ವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸಹಿತ ಹಲವು ನಾಯಕರು ನೆಹರೂ ಅವರಿಗೆ ಗೌರವ ಸಮರ್ಪಿಸಿದ್ದಾರೆ.
ಪ್ರಧಾನಿ ಮೋದಿ ಟ್ವಿಟ್ ಮಾಡಿ, “ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ ಜನ್ಮದಿನಾಚರಣೆಯ ದಿನದಂದು ಅವರಿಗೆ ನಮನಗಳು” ಎಂದು ಸ್ಮರಿಸಿದ್ದಾರೆ.
ವಿಪಕ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಆಧುನಿಕ ಭಾರತದ ಪಿತಾಮಹ, ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಗೌರವ ನಮನಗಳು. ಪ್ರಜಾಸತ್ತಾತ್ಮಕ, ಪ್ರಗತಿಪರ, ನಿರ್ಭೀತ, ದೂರದೃಷ್ಟಿಯ ಅವರ ಚಂತನೆಗಳು, ಮೌಲ್ಯಗಳು ಹಿಂದೂಸ್ತಾನದ ಆಧಾರಸ್ತಂಭಗಳಾಗಿವೆ” ಎಂದು ಟ್ವಿಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಗಾಂಧಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಮುಖಂಡರು ಕಾರ್ಯಕರ್ತರು ನೆಹರೂ ಅವರಿಗೆ ಸಾಮಾಜಿಕ ತಾಣದಲ್ಲಿ ಗೌರವ ನಮನ ಸಲ್ಲಿಸಿದ್ದಾರೆ.