Friday, April 18, 2025

ಮೃತದೇಹಗಳ ಹೆಸರಲ್ಲಿ ಭ್ರಷ್ಟಚಾರ ನಡೆಸಿದ ಬಿಜೆಪಿಗರನ್ನು ಯಾವ ದೇವರೂ ಕ್ಷಮಿಸಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಕೋವಿಡ್ ಹಗರಣ

by eesamachara
0 comment
siddaramaiah

ಬಳ್ಳಾರಿ: ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿ.ಎಸ್.ಯೆಡಿಯೂರಪ್ಪ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ  ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಡೂರು ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಮೆಟ್ರಿಕಿ ಗ್ರಾಮದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

“ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯೆಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಕುನ್ಹಾ ಅವರ ತನಿಖಾ ಆಯೋಗ ಶಿಫಾರಸು ಮಾಡಿದೆ. ಹಿಂದೆ ಜನಾರ್ದನರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ” ಎಂದು ವಾಗ್ದಾಳಿ ನಡೆಸಿದರು.

“ಇಂದಿರಾಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ. ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತಿದೆ” ಎಂದು ಕಿಡಿಕಾರಿದರು.

“ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗಲು ಸಾಧ್ಯವೇ ಇಲ್ಲ” ಎಂದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios