ಮೂಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಯುವಕನೋರ್ವನ ತಾನೂ ಆತ್ಮಹತ್ಯೆ ಮಾಡಿಕೊಂಡಗೊಂಡ ಘಟನೆ ಇಲ್ಲಿನ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32), ಹತ್ಯೆಗೀಡಾದವರನ್ನು ಆತನ ಪತ್ನಿ ಶಿವಮೊಗ್ಗ ಮೂಲದ ಪ್ರಿಯಾಂಕಾ (28), ಮಗು ಹೃದಯ್ (4) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಬಳಿಕ ಮೂಲ್ಕಿಯ ಬೆಳ್ಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಶುಕ್ರವಾರ ನಡೆದಿದೆ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಸುವಾಗ ಆತ್ಮಹತ್ಯೆ ಮಾಡಿಕೊಂಡವನು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಭಟ್ ಪಕ್ಷಿಕೆರೆ ಮುಖ್ಯ ಜಂಕ್ಷನ್ ನಲ್ಲಿರುವ ಹೋಟೆಲ್ ಅನ್ನು ತನ್ನ ತಂದೆ ತಾಯಿಯೊಂದಿಗೆ ನಡೆಸುತ್ತಿದ್ದರು. ಹತ್ತಿರದ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಮೂವರ ಸಾವು ಹಾಗೂ ಅದರ ಹಿಂದಿನ ಕಾರಣಗಳ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಸಿಗಬೇಕಾಗಿದೆ ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ : ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೆ ಆಗಿಲ್ಲ. ಕಾರ್ತಿಕ್ ಪತ್ನಿಗೆ ತನ್ನ ಮಾವ ಅತ್ತೆಯೊಂದಿಗೆ ಮನಸ್ತಾಪವಿದ್ದ ಮಾಹಿತಿ ಇದೆ. ಮನೆಯ ಕೋಣೆಯಲ್ಲಿ ಮತೃ ಕಾರ್ತಿಕ್ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.
ಇನ್ನು ಮೃತ ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್ಲ್ಲಿ ಹೋಟೆಲ್ ನಡೆಸುತ್ತಿದ್ದರು. ನಿನ್ನೆ ಬೆಳಗ್ಗೆಯೂ ಮನೆಯಿಂದ ಹೋಟೆಲ್ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮತ್ತು ಮಗುವನ್ನು ಕೋಣೆಯೊಳಗೆ ಕಾರ್ತಿಕ್ ಹತ್ಯೆ ಮಾಡಿದ್ದಾರೆ.
ನಿನ್ನೆ ರಾತ್ರಿಯೂ ಮಗ, ಸೊಸೆ ಮತ್ತು ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಾವಿಸಿದ್ದರು. ಇಂದು ಬೆಳಗ್ಗೆ ಕೂಡ ಎಂದಿನಂತೆ ಅವರು ಹೋಟೆಲ್ಗೆ ತೆರಳಿದ್ದಾರೆ. ಮಧ್ಯಾಹ್ನ ಕಾರ್ತಿಕ್ ವಿಳಾಸ ಹುಡುಕಿಕೊಂಡು ಪಕ್ಷಿಕೆರೆಯ ಮನೆಗೆ ಪೊಲೀಸರು ಬಂದಿದ್ದಾರೆ. ಮನೆಯ ಕೋಣೆಯ ಬಾಗಿಲು ತೆರೆದಾಗ ಕಾರ್ತಿಕ್ ಪತ್ನಿ, ಮಗ ಮೃತದೇಹ ಪತ್ತೆ ಆಗಿದೆ.