Friday, April 18, 2025

ರಾಜ್ಯದ ಹಲವೆಡೆ ನ.13ರಿಂದ ಮತ್ತೆ ಮಳೆ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

by eesamachara
0 comment
Rain

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ನ.13ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ನ.13ರಿಂದ ನ.16ರ ವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿಯಲ್ಲಿ ಗುಡುಗು ಸಹಿತ ವರ್ಷಧಾರೆಯಾಗಲಿದೆ.

ನ.14ರಿಂದ ಮುಂದಿನ 2 ದಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ನ.15ರಿಂದ ನ.16ರ ವರೆಗೆ  ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ನ.14ರಿಂದ ಮೂರು ದಿನಗಳ ಕಾಲ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ನೀಡಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios