ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರು (ಎಫ್‌ಡಿಎ, ಎಸ್‌ಡಿಎ) ಹುದ್ದೆಗಳ ಭರ್ತಿಗೆ ಮಾರ್ಚ್ 24 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 25 ಹಾಗೂ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ 76 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು. ಲಿಖಿತ ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಯಲಿದೆ. ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನ ಮತ್ತು ವಿವರವಾದ ಅಧಿಸೂಚನೆ ಪ್ರಕಟವಾಗುವ ದಿನ ಮಾರ್ಚ್ 24, ಅರ್ಜಿ ಸಲ್ಲಿಸಲು ಪ್ರಾರಂಭದ ದಿನ ಮಾ. 24, ಅರ್ಜಿ ಸಲ್ಲಿಸಲು ಕೊನೆಯ ದಿನ ಏ.23, ಶುಲ್ಕ ಪಾವತಿಸಲು ಕೊನೆಯ ದಿ ಏ. 25 ಆಗಿದೆ ಎಂದು ಕೆಇಎ ತಿಳಿಸಿದೆ.