Thursday, June 5, 2025

ಸಂಭಾಲ್​ ಹಿಂಸಾಚಾರ| ನಿಷೇಧಾಜ್ಞೆ-ಹೊರಗಿನವರ ಪ್ರವೇಶಕ್ಕೆ ನಿರ್ಬಂಧ, ಇಂಟರ್​ನೆಟ್,​ ಶಾಲಾ-ಕಾಲೇಜ್​ ಬಂದ್​

ಘರ್ಷಣೆಯಲ್ಲಿ ನಾಲ್ವರು ಯುವಕರು ಸಾವು

by eesamachara
0 comment

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದು, ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿ ನ.30ರವರೆಗೆ ಹೊರಗಿನ ಜನರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶಿಸಿದೆ.

ತಕ್ಷಣದಿಂದ ಜಾರಿಯಾಗುವಂತೆ, ಸಕ್ಷಮ ಅಧಿಕಾರಿಯ ಅನುಮತಿಯಿಲ್ಲದೆ ಹೊರಗಿನವರು, ಇತರ ಸಾಮಾಜಿಕ ಸಂಘಟನೆಗಳು ಅಥವಾ ಜನಪ್ರತಿನಿಧಿಗಳು ಜಿಲ್ಲೆಯ ಗಡಿಯನ್ನು ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನೂ ಸಂಭಾಲ್ ನಲ್ಲಿ 24 ಗಂಟೆಗಳ ಕಾಲ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ ಮತ್ತು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಘರ್ಷಣೆಯಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಇಬ್ಬರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಪೊಲೀಸ್​ ಸಿಬ್ಬಂದಿ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಈಗಾಗಲೇ 21 ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಭದ್ರತಾ ಪಡೆ ಬೀಡುಬಿಟ್ಟಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಮೊಘಲ್ ದೊರೆ ಬಾಬರ್ ಆಳ್ವಿಕೆ ಅವಧಿಯಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಅವರು ಸ್ಥಳೀಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವಿಡಿಯೊ ಚಿತ್ರೀಕರಣ ಮತ್ತು ಛಾಯಾಗ್ರಹಣ ಸಮೇತ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಸೂಚಿಸಿತ್ತು. ಜಾಮಾ ಮಸೀದಿಯ ಆವರಣದಲ್ಲಿ ನವೆಂಬರ್ 19ರಂದು ಸಮೀಕ್ಷೆ ನಡೆಸಲಾಗಿತ್ತು. ಆದರೆ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಪ್ರಾರ್ಥನೆಗಳಿಗೆ ಅಡ್ಡಿಯಾಗುವುದನ್ನು ತಪ್ಪಿಸಲು ರವಿವಾರ ಬೆಳಿಗ್ಗೆ ಸಮೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು. ನಿಗದಿಯಂತೆ ಸಮೀಕ್ಷೆಗೆ ಅಧಿಕಾರಿಗಳು ಮಸೀದಿಗೆ ಆಗಮಿಸಿದಾಗ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಹಿಂಸಾಚಾರಕ್ಕೆ ತಿರುಗಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios