92
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ದ.ಕ.ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಜೊತೆ ಸೆ.3ರಂದು ಅಪರಾಹ್ನ 3 ಗಂಟೆಗೆ ನಗರದ ಬೆಂದೂರುನಲ್ಲಿರುವ ಸಂತ ಸೆಬೆಸ್ಟಿಯನ್ ಜುಬುಲಿ ಹಾಲ್‌ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.