Wednesday, May 7, 2025

ಮಂಗಳೂರು: ನಾಳೆ ಸಂವಿಧಾನ ಜಾಗೃತಿ ಸಮಾವೇಶ, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ

by eesamachara
0 comment

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ನಾಳೆ (ಫೆ.18) ಮಧ್ಯಾಹ್ನ 2 ಗಂಟೆಗೆ  ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾರಾಯಣ ಗುರು ವೃತ್ತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆರ್.ಧರ್ಮಸೇನ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ  ಅಥಿತಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ದ.ಕ. ಲೋಕಸಭಾ ಅಭ್ಯರ್ಥಿ ಪದ್ಮರಾಜ್.ಆರ್, ಎಐಸಿಸಿ ಪ.ಘಟಕದ ಸಂಯೋಜಕ ಜಕ್ಕಪ್ಪನವರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಎಂ.ಎಸ್. ಮಹಮ್ಮದ್, ಇನಾಯತ್ ಅಲಿ, ರಕ್ಷಿತ್ ಶಿವರಾಂ, ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ.ಜಿ, ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ನಿಕಟಪೂರ್ವ ಅಧ್ಯಕ್ಷ ಶೇಖರ್ ಕುಕ್ಕೇಡಿ, ಕೆಪಿಸಿಸಿ ಸದಸ್ಯೆ ಎಸ್.ಅಪ್ಪಿ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಹಾಗೂ ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios