Saturday, July 5, 2025

ಮೈಸೂರು| ಉದಯಗಿರಿ ಗಲಭೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಬಂಧನ

by eesamachara
0 comments

ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಿದ್ದಾರೆ.

ಆರೋಪಿ ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ.

ಏನಿದು ಉದಯಗಿರಿ ಠಾಣೆ ಕಲ್ಲು ತೂರಾಟ ಪ್ರಕರಣ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಂತರ ಯುವಕನೋರ್ವ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ ಒಂದು ಗಲಭೆಗೆ ನಾಂದಿ ಹಾಡಿತ್ತು. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರ ಹಾಕಿ ವ್ಯಂಗ್ಯದ ಸಂದೇಶ ಪ್ರಕಟಿಸಿದ್ದ ಯುವಕ, ಅದರ ಜತೆಗೆ ಧರ್ಮವೊಂದಕ್ಕೆ ಅವಹೇಳನವಾಗುವಂಥ ಸಂದೇಶ ಪ್ರಕಟಿಸಿದ್ದ. ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಪ್ರಕರಣ ಆರೋಪಿ ಸತೀಶ್ (40)ಗೆ ಫೆ.17ರಂದು ಮೈಸೂರು 2ನೇ ಹೆಚ್ಚುವರಿ ಜಿಲ್ಲಾ ಸಿವಿಲ್ ನ್ಯಾಯಾಲಯವು ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆ ಸಂದರ್ಭದಲ್ಲಿ ಠಾಣೆ ಮುಂದೆ ಜಮಾಯಿಸಿದ್ದ ಗುಂಪೊಂದು ಏಕಾಏಕಿ ಘೋಷಣೆ ಕೂಗುತ್ತಾ ಪೊಲೀಸ್ ವಾಹನ, ಪೊಲೀಸ್ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತ್ತು. ಘಟನೆಯ ಭಯಾನಕ ಸಿಸಿಟಿವಿ ದೃಶ್ಯಗಳು ನಂತರ ವೈರಲ್ ಆಗಿದ್ದವು. ಕಲ್ಲು ತೂರಾಟಕ್ಕೆ ಪ್ರಚೋದನೆ ನೀಡಿದ ಆರೋಪ ಮೌಲ್ವಿ ಮುಫ್ತಿ ಮುಸ್ತಾಕ್ ಮೇಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂದು ಸಾವಿರ ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, 16 ಮಂದಿಯನ್ನು ಬಂಧಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios