Monday, December 23, 2024

UPSC ನೇಮಕಾತಿ: 27 ಸಹಾಯಕ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

by eesamachara
0 comment
UPSC

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು ಸಹಾಯಕ ಪ್ರೋಗ್ರಾಮರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಕೇಂದ್ರ ತನಿಖಾ ದಳ (ಸಿಬಿಐ), ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯಕ್ಕೆ ಈ ನೇಮಕಾತಿ ನಡೆಯಲಿದೆ.

ಒಟ್ಟು 27 ಅಸಿಸ್ಟೆಂಟ್ ಪ್ರೋಗ್ರಾಮರ್ ಹುದ್ದೆಗಳು ಖಾಲಿಯಿವೆ. ವಿದ್ಯಾರ್ಹತೆಯು ಬಿಇ, ಬಿಟೆಕ್, ಎಂಇ, ಎಂಟೆಕ್ ಮತ್ತು ಎಂಸಿಎ ಪದವಿ ಆಗಿದೆ. ಗರಿಷ್ಟ ವಯೋಮಿತಿ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ನವೆಂಬರ್ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 28 ಕಡೇಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾ, ಪ.ಪಂ, ವಿಶೇಷಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಇತರೆ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ upsc.gov.in ಭೇಟಿ ನೀಡಬಹುದು.

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios