Monday, December 23, 2024

ವಯನಾಡು ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಾದ್ರಾ ಭಾರಿ ಮುನ್ನಡೆ

by eesamachara
0 comment
Priyanka Gandhi Vadra

ವಯನಾಡು​: ಕೇರಳದ ವಯನಾಡ್​ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆ ಎದುರಿಸುತ್ತಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ವಯನಾಡ್​ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್​ ನೇತೃತ್ವದ ಯುಡಿಎಫ್​ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ವರ ಫಲಿತಾಂಶ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. ಸದ್ಯ ಆರಂಭಿಕ ಸುತ್ತಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಿಪಿಐ(ಎಂ) ಅಭ್ಯರ್ಥಿ ಸತ್ಯನ್​ ಮೊಕೆರಿ ಅವರಿಗಿಂತ 85,533 ಮತಗಳ ಮುನ್ನಡೆಯಲ್ಲಿದ್ದು, ಬೆಳಗ್ಗೆ 9.52ರ ಹೊತ್ತಿಗೆ 1,21,476 ಮತಗಳನ್ನು ಗಳಿಸಿದ್ದರು. ವಯನಾಡ್​ನಲ್ಲಿ ಈಗಾಗಲೇ ಅಂಚೆ ಮತಗಳು ಹಾಗೂ ಸೇವಾ ಮತಗಳ ಎಣಿಕೆ ಮುಗಿದು, ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios