Monday, December 23, 2024

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ಗೆ ಭರ್ಜರಿ ಗೆಲುವು | ನಿಖಿಲ್‌ ಕುಮಾರಸ್ವಾಮಿಗೆ ಹೀನಾಯ ಸೋಲು

by eesamachara
0 comment

ಚನ್ನಪಟ್ಟಣ: ಕರ್ನಾಟಕ ವಿಧಾನಸಭಾ ಉಪಚುನಾವಣೆಯಲ್ಲಿ ಹೈ ವೊಲ್ಟೇಜ್ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿದ್ದ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಹೀನಾಯವಾಗಿ ಸೋತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ

ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.

ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಠೆಯಾಗಿ ತಗೆದುಕೊಂಡಿದ್ದರು. ಇನ್ನೊಂದೆಡೆ ಸಚಿವ ಝಮೀರ್ ಹೇಳಿಕೆಯಿಂದ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ಎನ್ನಲಾಗಿತ್ತು. ಆದರೆ ಝಮೀರ್ 20 ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅದರಂತೆ, ಯೋಗೇಶ್ವರ್‌ ಭರ್ಜರಿ ಮತಗಳ ಅಂತರದಿಂದ ಗೆದ್ದಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios